ಹೃದಯ ಸಂಭಂದೀ ಸಮಸ್ಯೆಗಳಿಂದ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೃದಯ ಜ್ಯೋತಿ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸಿದೆ. ಹೃದಯಾಘಾತಕ್ಕೆ ಒಳಗಾದವರಿಗೆ golden hour ಒಳಗೆ ಚಿಕಿತ್ಸೆ ಕೊಡುವುದು ಬಹಳ ಮುಖ್ಯ. ಇದರಿಂದ ಹೃದಯಾಘಾತ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬಹುದು. ಗೋಲ್ಡನ್ ಟೈಮ್ ಒಳಗೆ ಪ್ರಥಮ ಚಿಕಿತ್ಸೆ & ಸೂಕ್ತ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೃದಯಾಘಾತ ಚಿಕಿತ್ಸೆಯನ್ನು ನೀಡಲು ಕ್ರಮಕೈಗೊಳ್ಳಲಾಗಿದೆ. 45 ಸಾವಿರದ ಚುಚ್ಚು ಮದ್ದು […]